ನೀರ್ಚಾಲು : ಇತ್ತೀಚೆಗೆ ಮುಳ್ಳೇರಿಯದಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಮಟ್ಟದ ಕಲೋತ್ಸವದಲ್ಲಿ ಎಲ್.ಪಿ ವಿಭಾಗದ ಸ್ಪರ್ಧೆಗಳಲ್ಲಿ ಸಮಗ್ರ ಚಾಂಪಿಯನ್ ಶಿಪ್ ಮತ್ತು ಕನ್ನಡ ವಿಭಾಗದ ಸ್ಪರ್ಧೆಗಳಲ್ಲಿ ರನ್ನರ್ ಅಪ್ ಚಾಂಪಿಯನ್ ಶಿಪ್ ಪಡೆದು ಸಾಧನೆ ಮಾಡಿದ ಮಕ್ಕಳಿಗೆ ಮತ್ತು ಉಪಜಿಲ್ಲಾ ಮಟ್ಟದ ಶಾಸ್ತ್ರೋತ್ಸವದಲ್ಲಿ ವಿಜೇತರಾದ ಮಕ್ಕಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಜನವರಿ 7, ಬುಧವಾರ ನಡೆಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶಾಲಾ ಪ್ರಬಂಧಕರಾದ ಶ್ರೀ ಜಯದೇವ ಖಂಡಿಗೆ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಪ್ರಶಾಂತ್ ಕುಮಾರ್ ಶೆಟ್ಟಿಯವರು ವಹಿಸಿದರು. ಶಾಲಾ ಮಾತೃ ಮಂಡಳಿ ಅಧ್ಯಕ್ಷೆ ಶ್ರೀಮತಿ ಕಾವ್ಯಶ್ರೀಯವರು ಕಾರ್ಯಕ್ರಮದಲ್ಲಿ ಶುಭಾಶಯಗಳನ್ನು ಹೇಳಿದರು. ಕುಂಬಳೆ ಉಪಜಿಲ್ಲಾ ಮಟ್ಟದ ಶಾಲಾಕಲೋತ್ಸವ ಮತ್ತು ಶಾಸ್ತ್ರೋತ್ಸವದಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಬಹುಮಾನಗಳನ್ನು ನೀಡಿ ಅಭಿನಂದಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮಾಲತಿ ವೈ ಸ್ವಾಗತಿಸಿದರು. ಶಾಲಾ ಶಿಕ್ಷಕಿ ಕುಮಾರಿ ವೈಷ್ಣವಿ ಧನ್ಯವಾದ ಸಮರ್ಪಿಸಿದರು. ಶಾಲಾ ಶಿಕ್ಷಕಿ ಕುಮಾರಿ ವೀಕ್ಷಿತ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದ ಕೊನೆಗೆ ಮಕ್ಕಳಿಗೆ ಸಿಹಿ ತಿಂಡಿಗಳನ್ನು ವಿತರಿಸಲಾಯಿತು.
ನೀರ್ಚಾಲಿನ ಮಹಾಜನ ಸಂಸ್ಕೃತ ಕಾಲೇಜು ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ
byGADINAADU
-
0
