ಮಂಜೇಶ್ವರ: ಶಾಸಕ ಎ.ಕೆ.ಎಂ. ಅಶ್ರಫ್ ಅವರ ಮತಗಳ್ಳತನದ ಆರೋಪವು ಸೋಲಿನ ಭಯದಿಂದ ಕೂಡಿದೆ. ಮತದಾರರ ಪಟ್ಟಿಯಿಂದ ನಕಲಿ ಮತದಾರರನ್ನು ತೆಗೆದುಹಾಕಲು ಸಲ್ಲಿಸಲಾದ ಅರ್ಜಿಗಳ ಕುರಿತು ಕಾಸರಗೋಡು ಜಿಲ್ಲಾಧಿಕಾರಿಗಳು ತಮ್ಮ ನಿಲುವನ್ನು ಸ್ಪಷ್ಟಪಡಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷರಾದ ಎಂ.ಎಲ್. ಅಶ್ವಿನಿ ಹೇಳಿದರು.
ಮತದಾರರ ಪಟ್ಟಿಯಿಂದ ಹೆಸರುಗಳನ್ನು ರದ್ದುಪಡಿಸಲು ಅರ್ಜಿ ಸಲ್ಲಿಸಿದ ಬಿಜೆಪಿ ನಾಯಕನ ಹೆಸರನ್ನು ಪ್ರಸ್ತಾಪಿಸಿ ಬೆದರಿಸಲು ಮಂಜೇಶ್ವರ ಶಾಸಕರು ಪ್ರಯತ್ನಿಸುತ್ತಿದ್ದಾರೆ. ಮತದಾರರ ಪಟ್ಟಿಗೆ ಹೆಸರು ಸೇರಿಸುವಂತೆಯೇ, ಅನರ್ಹ ಹೆಸರುಗಳನ್ನು ತೆಗೆದುಹಾಕಲು ಅರ್ಜಿ ಸಲ್ಲಿಸುವುದು ಕೂಡ ಪ್ರಜಾಪ್ರಭುತ್ವ ಪ್ರಕ್ರಿಯೆಯ ಭಾಗವಾಗಿದೆ.
ನಕಲಿ ಮತದಾರರು ಮತ್ತು ಎರಡೆರಡು ಕಡೆ ಮತ ಹೊಂದಿರುವವರನ್ನು ಬಳಸಿಕೊಂಡೇ ಮುಸ್ಲಿಂ ಲೀಗ್ ಇದುವರೆಗಿನ ಚುನಾವಣೆಗಳಲ್ಲಿ ಮುನ್ನಡೆ ಸಾಧಿಸುತ್ತಾ ಬಂದಿದೆ. ಇದಕ್ಕಾಗಿ ಲೀಗ್ ಆಡಳಿತವಿರುವ ಸ್ಥಳೀಯ ಸಂಸ್ಥೆಗಳಲ್ಲಿ ನಕಲಿ ವಾಸ್ತವ್ಯ ದೃಢೀಕರಣ ಪತ್ರಗಳನ್ನು ವಿತರಿಸಲಾಗುತ್ತಿದೆ ಎಂದು ಅಶ್ವಿನಿ ಆರೋಪಿಸಿದರು.
Tags
ಕಾಸರಗೋಡು
