ಬದಿಯಡ್ಕ: ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿ ಕ್ಯಾಂಪ್ಕೋ ಬದಿಯಡ್ಕ ಶಾಖೆಯ ಸಕ್ರಿಯ ಸದಸ್ಯರಾದ ಗೋಪಾಲಕೃಷ್ಣ ಭಟ್ಟರು ಆಕಸ್ಮಿಕವಾಗಿ ನಿಧನರಾಗಿರುವ ಹಿನ್ನೆಲೆಯಲ್ಲಿ, ಅವರ ಧರ್ಮಪತ್ನಿ ಶ್ರೀಮತಿ ವೈಜಯಂತಿ ಅವರಿಗೆ ರೂ. 50,000/- ಸಹಾಯಧನದ ಚೆಕ್ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ ಪದ್ಮರಾಜ ಪಟ್ಟಾಜೆ ಅವರು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಬದಿಯಡ್ಕ ಪ್ರಾಂತೀಯ ವ್ಯವಸ್ಥಾಪಕ ಚಂದ್ರ ಎಂ., ಬದಿಯಡ್ಕ ಶಾಖೆಯ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಗೂ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.
Tags
ಬದಿಯಡ್ಕ
