ಕುಂಬಳೆ:- ಮುಜುಂಗಾವಿನ ಶ್ರೀ ಭಾರತೀವಿದ್ಯಾಪೀಠದ ಈ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ಪಂದನ (ಬೀಳ್ಕೊಡುಗೆ)ಕಾರ್ಯಕ್ರಮವು 28-02-2026ನೇ ಶನಿವಾರದಂದು ವಿದ್ಯಾರ್ಥಿಗಳ ವಿವಿಧ ಚಟುವಟಿಕೆಗಳೊಂದಿಗೆ ನೆರವೇರಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಲಯದ ಆಡಳಿತ ಸಮಿತಿ ಕಾರ್ಯದರ್ಶಿಗಳಾದ ಶ್ರೀ ಸುಬ್ರಹ್ಮಣ್ಯ ಪ್ರಸಾದ್,ಹಿಳ್ಳೆಮನೆ ಇವರು ವಹಿಸಿ ಜೀವನ ಮೌಲ್ಯಗಳ ಬಗ್ಗೆ ನಾವು ನೀಡಬೇಕಾದ ಮಹತ್ವವನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸ ಬೇಕೆಂದು ಕಿವಿಮಾತು ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಮತಿ ವಸಂತಕುಮಾರಿ ಕೊಂಗೋಟು, ಕುಂಬಳೆ ಇವರು ,ವಿದ್ಯಾರ್ಥಿಗಳ ನಡೆನುಡಿಗಳ ಬಗ್ಗೆ ಸಲಹೆಗಳನ್ನಿತ್ತರಲ್ಲದೆ , ಮಂದಿನ ವಿದ್ಯಾರ್ಥಿ ಜೀವನದಲ್ಲಿ ಉತ್ತಮ ವಿದ್ಯಾರ್ಥಿಗಳಾಗಿ ಎಂದು ಕಿವಿಮಾತು ಹೇಳಿದರು
ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಉದಯಕುಮಾರ್ ಮಾಯಿಪ್ಪಾಡಿ ಇವರು ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು.
ಶಾಲಾಮುಖ್ಯೋಪಾಧ್ಯಾಯರಾದ ಶ್ಯಾಂಭಟ್ ದರ್ಭೆಮಾರ್ಗ, ವಿದ್ಯಾಲಯಕ್ಕೆ ವಿದ್ಯಾರ್ಥಿಗಳು ಸ್ಪಂದಿಸಬೇಕು.ನಿಮ್ಮನ್ನು ಕಳುಹಿಸಿ ಕೊಡುವುದಲ್ಲ, ಎಂಬ ವಿವರಣೆಯೊಂದಿಗೆ ಸ್ಪಂದನದ ಮೂಲೋದ್ದೇಶವನ್ನು ತಿಳಿಸಿದರು. ಅಧ್ಯಾಪಿಕೆ ಶ್ರೀಮತಿ ಚಿತ್ರಾ ಸರಸ್ವತಿ ಮಕ್ಕಳ ಸ್ಥಾನವನ್ನು ಮೇಲಕ್ಕೇರಿಸುವ ಅರ್ಥ ವಿವರಣೆಯೊಂದಿಗೆ ಸ್ಪಂದನದ ಮೂಲೋದ್ದೇಶ,ಮಕ್ಕಳು ಮುಂದೆಯೂ ಶಾಲೆಯ ಬಗ್ಗೆ ವಹಿಸಬೇಕಾದ ಕಾಳಜಿ ತಿಳಿಸಿದರು.
ಅಧ್ಯಾಪಕರೆಲ್ಲರೂ ವಿದ್ಯಾರ್ಥಿಗಳಿಗೆ ಶುಭಾಶಯವನ್ನು ಕೋರಿದರು. ವಿದ್ಯಾಲಯದ ವತಿಯಿಂದ ವಿದ್ಯಾರ್ಥಿಗಳಿಗೆ ಜ್ಞಾನದ ಪ್ರತೀಕವಾದ ದೀಪಗಳನ್ನು ಸ್ಮರಣಿಕೆಗಳಾಗಿ ನೀಡಲಾಯಿತು. ಒಂಬತ್ತನೆ ತರಗತಿಯ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಸಂಯೋಜಿಸಿ, ನಿರೂಪಿಸಿದರು.
Tags
ಕುಂಬಳೆ


