ಕುಂಬಳೆ: ಕುಂಬಳೆ-ಬದಿಯಡ್ಕ ರಸ್ತೆಯ ಶಾಂತಿಪಳ್ಳದಲ್ಲಿ ಬಸ್ಸು ಹಾಗೂ ಕಾರು ಪರಸ್ಪರ ಡಿಕ್ಕಿ ಹೊಡೆದು ಹಲವರು ಗಾಯಗೊಂಡ ಘಟನೆ ನಡೆದಿದೆ. ಬದಿಯಡ್ಕದಿಂದ ಕುಂಬಳೆಗೆ ಸಾಗುತ್ತಿದ್ದ ಖಾಸಗಿ ಬಸ್ಸು ಹಾಗೂ ಕುಂಬಳೆಯಿಂದ ಬದಿಯಡ್ಕ ಭಾಗಕ್ಕೆ ಬರುತ್ತಿದ್ದ ಕಾರು ಪರಸ್ಪರ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ನಾಲ್ಕು ಮಂದಿಯನ್ನು ಚೆಂಗಳ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಹಲವು ಬಸ್ ಪ್ರಯಾಣಿಕರಿಗೂ ಗಾಯಗಳಾಗಿದ್ದು ಅವರನ್ನು ವಿವಿದ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ
Tags
ಕುಂಬಳೆ
