ಕಾಞಂಗಾಡ್: ಮಹಿಳಾ ಮೋರ್ಚಾ ಕಾಸರಗೋಡು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾಞಂಗಾಡ್ ಅಂಬಲತ್ತರ ಸ್ನೇಹವೀಡುವಿನಲ್ಲಿ ಜರಗಿತು. ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ಅಧ್ಯಕ್ಷೆ ಅಶ್ವಿನಿ ಎಂ.ಎಲ್ ಉದ್ಘಾಟಿಸಿದರು. ಅವರು ಮಾತನಾಡಿ ಕೇಂದ್ರ ಸರಕಾರ ಜಾರಿಗೊಳಿಸಿದ ಹಲವು ಆರ್ಥಿಕ ಪರಿಷ್ಕಾರಗಳು ಮಹಿಳೆಯರ ಆರ್ಥಿಕ ಮಟ್ಟವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ ಎಂದರು.
ರಾಷ್ಟ್ರಪತಿ ಸಹಿತ ಹಲವು ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರು ಇದ್ದಾರೆ. ಇದು ನರೇಂದ್ರ ಮೋದಿ ಸರಕಾರದ ಸಾಧನೆಯಾಗಿದೆ ಎಂದವರು ಹೇಳಿದರು. ಕಾರ್ಯಕ್ರಮದಲ್ಲಿ ಸ್ನೇಹವೀಡು ಸಿಬಂದಿ ಮುನೀಸ, ತೈಕೊಂಡೊ ರಾಷ್ಟ್ರೀಯ ವಿಜೇತೆ ಸ್ನೇಹ ಕೆ ಸಹಿತ ಹಲವರನ್ನು ಸನ್ಮಾನಿಸಲಾಯಿತು.
ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಕೆ.ಎಸ್.ರಮಣಿ ಅಧ್ಯಕ್ಷತೆ ವಹಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿತಾ ನಾಯಕ್, ಪ್ರೇಮಲತ ಎಸ್, ಆಶಾ, ಕೆ.ಶೋಭನ, ಸಜಿ, ಶೀಬ, ಮುರಳೀಧರನ್ ಎ.ಎಂ,ಅಂಬಲತ್ತರ ಕುಞಕೃಷ್ಣನ್ ಮೊದಲಾದವರು ಉಪಸ್ಥಿತರಿದ್ದರು.
Tags
ಕಾಞಂಗಾಡ್

