ಕಾಸರಗೋಡು: ಮಹಿಳಾ ಮೀಸಲಾತಿ ಮಸೂದೆಯನ್ನು ಸೋಲಿಸಿದ ಕಾಂಗ್ರೆಸ್ ಮತ್ತು ಸಿಪಿಎಂ ಸೇರಿದಂತೆ ವಿರೋಧ ಪಕ್ಷಗಳ ನಿಲುವನ್ನು ವಿರೋಧಿಸಿ, ಬಿಜೆಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನಾಳೆ (ಏಪ್ರಿಲ್ 29 ಬುಧವಾರ)ಪ್ರತಿಭಟನೆ ನಡೆಯಲಿದೆ. ಪ್ರತಿಭಟನೆಯ ಅಂಗವಾಗಿ ನಾಳೆ ಮದ್ತಾಹ್ನ 3 ಗಂಟೆಗೆ ತಾಳಿಪಡ್ಪು ಮೈದಾನದಿದ ಮಹಿಳೆಯರ ಬೃಹತ್ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ. ಮೆರವಣಿಗೆಯು ಹೊಸ ಬಸ್ ನಿಲ್ದಾಣದ ಪರಿಸರದಲ್ಲಿ ಮುಕ್ತಾಯಗೊಂಡು, ಅಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ.ಈ ಪ್ರತಿಭಟನಾ ಕಾರ್ಯಕ್ರಮದಲ್ಲಿ ಬಿಜೆಪಿ ಮತ್ತು ಮಹಿಳಾ ಮೋರ್ಚಾದ ರಾಜ್ಯ ಹಾಗೂ ಜಿಲ್ಲಾ ಮಟ್ಟದ ನಾಯಕರು ಭಾಗವಹಿಸಲಿದ್ದಾರೆ.
Tags
ಕಾಸರಗೋಡು
