ಕಾಸರಗೋಡು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಸರಗೋಡು ವಿಧಾನಸಭಾ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪಽಸುವ ಎಂ.ಎಲ್. ಅಶ್ವಿನಿ ಅವರಿಗೆ ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಬೆಂಬಲ ಘೋಷಿಸಿದ್ದಾರೆ.
ಈ ಬಗ್ಗೆ ಬದಿಯಡ್ಕದ ಮನುಕುಲ ಅಪಾರ್ಟ್‌ಮೆಂಟ್‌ನ ಸಭಾಂಗಣದಲ್ಲಿ ನಡೆದ ಅಭ್ಯರ್ಥಿಯೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಂ.ಎಲ್.ಅಶ್ವಿನಿ, ಶಾಸಕಿಯಾಗಿ ಆಯ್ಕೆಯಾದರೆ ಜಿಲ್ಲೆಯ ಭಾಷಾ ಅಲ್ಪಸಂಖ್ಯಾತರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು. ಅದಲ್ಲದೇ ಕನ್ನಡಕ್ಕಾಗಿ ಸದಾ ದುಡಿಯುವ ಕಾಸರಗೋಡಿನ ಕನ್ನಡ ಪತ್ರಕರ್ತರ ಕ್ಷೇಮಕ್ಕಾಗಿ ಯೋಜನೆಗಳನ್ನು ರೂಪಿಸುವುದಾಗಿ ಎಂ.ಎಲ್.ಅಶ್ವಿನಿ ಹೇಳಿದರು.
ಈ ಸಂದರ್ಭದಲ್ಲಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಗಂಗಾಧರ್ ಅಭ್ಯರ್ಥಿಯನ್ನು ಶಾಲು ಹಾಕಿ ಸ್ವಾಗತಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಪಿ.ಆರ್, ಮಂಡಲ ಅಧ್ಯಕ್ಷ ಗೋಪಾಲಕೃಷ್ಣ ಎಂ.ಸಹಿತ ಹಲವರು ಉಪಸ್ಥಿತರಿದ್ದರು.
ಪತ್ರಕರ್ತರ ಸಂಘದ ಸದಸ್ಯರು ಭಾಗವಹಿಸಿದರು. ಮಹೇಶ್ ವಳಕುಂಜ ವಂದಿಸಿದರು
Tags
ಬದಿಯಡ್ಕ
