ಕೇರಳದಲ್ಲಿ ಭಾರೀ ಬೇಸಿಗೆ ಮಳೆ: ಕಾಸರಗೋಡು ಸಹಿತ ಮೂರು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್



ತಿರುವನಂತಪುರಂ: ಕಾಸರಗೋಡು ಸೇರಿದಂತೆ ಕೇರಳದ ಮೂರು ಜಿಲ್ಲೆಗಳಲ್ಲಿ ಇಂದು ಭಾರೀ ಬೇಸಿಗೆ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಾಸರಗೋಡು, ಕಣ್ಣೂರು ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಬೆಳಗ್ಗಿನಿಂದಲೇ‌ ಕಾಸರಗೋಡು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದೆ.

 ಮಳೆಯ ಜೊತೆಗೆ ಗುಡುಗು, ಮಿಂಚು ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

  ಮೇ 2 ರವರೆಗೆ ರಾಜ್ಯದ ವಿವಿಧೆಡೆ ಬಿಡಿಬಿಡಿಯಾಗಿ ಮಳೆಯಾಗಲಿದೆ.

   ಮೇ 1 ರಂದು ಪತ್ತನಂತಿಟ್ಟ, ಇಡುಕ್ಕಿ ಮತ್ತು ವಯನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ.

   ಮೇ 2 ರಂದು ವಯನಾಡು, ಎರ್ನಾಕುಲಂ, ಆಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

 ಗುಡುಗು ಮತ್ತು ಮಿಂಚಿನ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಮತ್ತು ಜಾಗರೂಕರಾಗಿರಲು ಹವಾಮಾನ ಇಲಾಖೆ ಸೂಚಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು