ಶಬರಿಮಲೆ ಅಯ್ಯಪ್ಪ ಸೇವಾ ಸಮಾಜ ಕಾಸರಗೋಡು ಜಿಲ್ಲಾ ಸಮ್ಮೇಳನವು ಮೇ 3 ರಂದು


 ಕಾಸರಗೋಡು: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜ ಕಾಸರಗೋಡು ಜಿಲ್ಲಾ ಸಮ್ಮೇಳನವು ಮೇ 3 ರವಿವಾರ ಬೆಳಗ್ಗೆ 9 ಗಂಟೆಗೆ ಸರಿಯಾಗಿ ಉದಯಗಿರಿ ಅಯ್ಯಪ್ಪ ಮಂದಿರ ಪರಿಸರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. 

ಸಮ್ಮೇಳನದ ಉದ್ಘಾಟನೆಯನ್ನು  ಸಮಾಜದ ರಾಜ್ಯ ಸಮಿತಿ ಕಾರ್ಯದರ್ಶಿ ಶ್ರೀಮತಿ ಜಯಶ್ರೀ ಜಿ ಅವರು ನಿರ್ವಹಿಸಲಿದ್ದಾರೆ. ರಾಜ್ಯ ಸಮಿತಿ ಕಾರ್ಯದರ್ಶಿ ವಜಿಂತ್ ರಾಮಕೃಷ್ಣನ್ ಅತಿಥಿಗಳಾಗಿ ಉಪಸ್ಥಿತರಿರುವರು.

 ಸಮ್ಮೇಳನದಲ್ಲಿ ಸೇವಾ ಸಮಾಜದ ತಾಲೂಕು, ಜಿಲ್ಲಾ ಪದಾಧಿಕಾರಿಗಳು, ಗುರುಸ್ವಾಮಿ ಗಳು, ಹಾಗೂ ಎಲ್ಲಾ ಅಯ್ಯಪ್ಪ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು