ಸೀತಾಂಗೋಳಿ: ಯುವಕನ ಮೃತದೇಹ ಸೀತಾಂಗೋಳಿಯ ಕಟ್ಟಡವೊಂದರ ಹಿಂಭಾಗದಲ್ಲಿ ಪತ್ತೆಯಾಗಿದೆ. ಕನ್ನೆಪ್ಪಾಡಿ ಬಳಿಯ ಬಾಪ್ಪಾಲಿಪನಂ ಪಾಡಲಡ್ಕ ನಿವಾಸಿ ಸಫಾಯತ್ (30) ಮೃತಪಟ್ಟ ದುರ್ದೈವಿ. ಇಂದು (ಮಂಗಳವಾರ) ಮಧ್ಯಾಹ್ನ ಸುಮಾರು 2 ಗಂಟೆಗೆ ಮೃತದೇಹ ಪತ್ತೆಯಾಗಿದೆ. ಸಫಾಯತ್ ನ ತಲೆಯ ಹಿಂಭಾಗದಲ್ಲಿ ಆಳವಾದ ಗಾಯಗಳು ಇವೆ. ಇದೊಂದು ವ್ಯವಸ್ಥಿತ ಕೊಲೆ ಎಂದು ಸಂಶಯಿಸಲಾಗಿದೆ.
ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಮೃತದೇಹದ ಸಮೀಪ ಕೊಲೆಗೆ ಬಳಸಲಾಗಿದೆ ಎನ್ನಲಾದ ಮಾರಕಾಸ್ತ್ರಗಳು ಪತ್ತೆಯಾಗಿವೆ.
ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೂ, ವೈಯಕ್ತಿಕ ದ್ವೇಷ ಅಥವಾ ಹಳೆಯ ಜಗಳ ಈ ಕೃತ್ಯಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಸಫಾಯತ್‌ನ ಸ್ನೇಹಿತರು ಮತ್ತು ಸಂಬಂಧಿಕರಿಂದ ಮಾಹಿತಿ ಕಲೆಹಾಕುತ್ತಿದ್ದಾರೆ.
Tags
ಸೀತಾಂಗೋಳಿ

