ಮಲಪ್ಪುರಂನಲ್ಲಿ ಸಿಡಿಲು ಬಡಿದು ನಾಲ್ಕು ಮಂದಿ ವಿದ್ಯಾರ್ಥಿಗಳು ಮೃತ್ಯು

 

ಮಲಪ್ಪುರಂ ಜಿಲ್ಲೆಯ ಮಂಕಡದಲ್ಲಿ ಸಂಭವಿಸಿದ ಭೀಕರ ಸಿಡಿಲು ಬಡಿತಕ್ಕೆ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ ಇತರ ಮೂವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ. ಸಿಯಾದ್ (18), ಫಹಾದ್ (19),ರಹೀಸ್ (20),ವಹಾಸ್ (18) ಮೃತಪಟ್ಟವರ

ಈ ಘಟನೆಯಲ್ಲಿ ರೋಷನ್ (20, ಇಷ್ಹಾತ್ (16)ಮತ್ತು ಇನ್ನೊಬ್ಬ ವಿದ್ಯಾರ್ಥಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟವರೆಲ್ಲರೂ ಸ್ನೇಹಿತರಾಗಿದ್ದು, ಮಂಕಡದ ಬಳಿ ಈ ದುರಂತ ಸಂಭವಿಸಿದೆ. ಮಲಪ್ಪುರಂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಇಂದು(ಮಂಗಳವಾರ) ಸಾಯಂಕಾಲ ಈ ಘಟನೆ ನಡೆದಿದೆ. ಮೃತಪಟ್ಟವರು ಹಾಗೂ ಗಾಯಗೊಂಡವರು ಪಿಕ್ ನಿಕ್ ಗೆಂದು ಬಂದಿದ್ದ ವೇಳೆ ಘಟನೆ ನಡೆದಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು