ನೆಲ್ಯಾಡಿ ಬಳಿ ಬೈಕುಗಳು ಪರಸ್ಪರ ಡಿಕ್ಕಿ ಹೊಡೆದು ಮಡಿಕೈ ಸಮೀಪದ ಯುವಕ ಮೃತ್ಯು


 ಮಂಗಳೂರು: ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನೆಲ್ಯಾಡಿ ಸಮೀಪ ಸಂಭವಿಸಿದ ಬೈಕ್ ಅಪಘಾತದಲ್ಲಿ ಕಾಸರಗೋಡು ಜಿಲ್ಲೆಯ ಯುವಕನೊಬ್ಬ ಮೃತಪಟ್ಟಿದ್ದಾನೆ. ಮಡಿಕೈ, ಎರಿಕ್ಕುಳಂ ನಿವಾಸಿ ವಿ. ರಿಜೇಶ್ (33) ಮೃತಪಟ್ಟ ದುರ್ದೈವಿ.

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೊಕ್ರಾಡಿ ಪೆರಿಯಶಾಂತಿ ಎಂಬಲ್ಲಿ ಇಂದು (ಬುಧವಾರ) ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ರಸ್ತೆಗೆ ಎಸೆಯಲ್ಪಟ್ಟ ರಿಜೇಶ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿವೆ.

ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ರಿಜೇಶ್ ಅವರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅಂತ್ಯಸಂಸ್ಕಾರವು ಗುರುವಾರ ಬೆಳಗ್ಗೆ 10 ಗಂಟೆಗೆ ಎರಿಕ್ಕುಳಂನಲ್ಲಿ ನಡೆಯಲಿದೆ. ಮೃತರು ವಿ. ಚಿಂದನ್ ಮತ್ತು ಮಾಲಿನಿ ದಂಪತಿಯ ಪುತ್ರನಾಗಿದ್ದಾರೆ. ಮೃತರು ಪತ್ನಿ: ಡಾ. ಕೃಷ್ಣಪ್ರಭಾ (ಆಯುರ್ವೇದ ವೈದ್ಯರು, ಮಂಗಳೂರು) ಸಹೋದರರಾದ ಮನೀಶ್, ಪ್ರಜೀಶ್ ಎಂಬಿವರನ್ನು ಅಗಲಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು