ಸ್ನೇಹಿತನ ಹಲ್ಲೆಯಿಂದಾಗಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಅತಿಥಿ ಉಪಾನ್ಯಾಸಕಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಕಣ್ಣೂರು ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕಿ, ಪಾನೂರು ವಳ್ಳಂಗಾಡ್ ನಿವಾಸಿ ಆದಿತ್ಯ ಅನಿಲ್ ಕುಮಾರ್ (28) ಮೃತಪಟ್ಟ ದುರ್ದೈವಿ. ಕಳೆದ ಭಾನುವಾರ ಇವರು ಆತ್ಮಹತ್ಯೆಗೆ ಯತ್ನಿಸಿದ್ದರು. ರಾತ್ರಿ ಮನೆಯೊಳಗೆ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾದ ಇವರನ್ನು ತಕ್ಷಣವೇ ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಗುರುವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ತನ್ನ ಗಂಡು ಸ್ನೇಹಿತನ (Boyfriend) ದೈಹಿಕ ಹಲ್ಲೆಯಿಂದ ಮನನೊಂದು ಆದಿತ್ಯ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆಕೆಯ ಸಂಬಂಧಿಕರು ಆರೋಪಿಸಿದ್ದಾರೆ. ಕುಟುಂಬಸ್ಥರ ದೂರಿನ ಮೇರೆಗೆ ಪಾನೂರು ಪೊಲೀಸರು ಯುವಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕುಟುಂಬದ ಆರೋಪಗಳು ಸೇರಿದಂತೆ ಎಲ್ಲಾ ಆಯಾಮಗಳಲ್ಲೂ ಪರಿಶೀಲನೆ ನಡೆಸಲಾಗುತ್ತಿದ್ದು, ವಿವರವಾದ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Tags
ಕಣ್ಣೂರು
