ಕಾಸರಗೋಡು: ಜಿಲ್ಲೆಯಲ್ಲಿ ಕೇಂದ್ರ ಹವಾಮಾನ ಇಲಾಖೆಯು ನಾಳೆ ತೀವ್ರ ಮಳೆಯ ಸಾಧ್ಯತೆಯನ್ನು (ಆರೆಂಜ್ ಅಲರ್ಟ್) ಮುನ್ಸೂಚನೆ ನೀಡಿರುವುದರಿಂದ ಮತ್ತು ನಿರಂತರವಾಗಿ ಬಲವಾದ ಮಳೆ ಮುಂದುವರಿಯುತ್ತಿರುವುದರಿಂದ, ಮುಂಜಾಗ್ರತಾ ಕ್ರಮವಾಗಿ ನಾಳೆ ( ಜುಲೈ 1) ಶಾಲೆಗಳಿಗೆ ರಜೆ ಸಾರಲಾಗಿದೆ. ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಕಾಲೇಜುಗಳು, ಶಾಲೆಗಳು, ಅಂಗನವಾಡಿಗಳು, ನರ್ಸರಿಗಳು, ಕೇಂದ್ರೀಯ ವಿದ್ಯಾಲಯಗಳು, ಸಿ.ಬಿ.ಎಸ್.ಇ (CBSE), ಐ.ಸಿ.ಎಸ್.ಇ (ICSE) ಶಾಲೆಗಳು, ಟ್ಯೂಷನ್ ಸೆಂಟರ್‌ಗಳು ಮತ್ತು ಮದರಸಾಗಳು ಒಳಗೊಂಡಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ರಜೆ ಘೋಷಿಸಿದ್ದಾರೆ.
ಇದೇ ವೇಳೆ ಮುಂಚಿತವಾಗಿ ನಿಗದಿಪಡಿಸಲಾದ ಪರೀಕ್ಷೆಗಳು ಮತ್ತು ಸಂದರ್ಶನಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ
Tags
ಕಾಸರಗೋಡು

