ಬದಿಯಡ್ಕ: ಬದಿಯಡ್ಕದ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಸಡಗರ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಆರಂಭದ ದಿನಗಳಿಂದಲೇ ಯೋಗ ಶಿಕ್ಷಣವನ್ನು ಪಠ್ಯಕ್ರಮದ ಒಂದು ಭಾಗವಾಗಿ ಅಳವಡಿಸಿಕೊಂಡು ಬಂದಿರುವ ಈ ಸಂಸ್ಥೆಯಲ್ಲಿ, ವಿದ್ಯಾರ್ಥಿಗಳು ಶಿಸ್ತುಬದ್ಧವಾಗಿ ಯೋಗಾಸನಗಳನ್ನು ಪ್ರದರ್ಶಿಸುವ ಮೂಲಕ ಗಮನ ಸೆಳೆದರು. ಕಾರ್ಯಕ್ರಮವು ಸಾಂಪ್ರದಾಯಿಕವಾಗಿ ದೀಪ ಪ್ರಜ್ವಲನೆಯೊಂದಿಗೆ ಆರಂಭವಾಯಿತು. ಶಾಲೆಯ 1ನೇ ತರಗತಿಯಿಂದ 10ನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳು ಒಟ್ಟಾಗಿ ವಿವಿಧ ಯೋಗಾಸನಗಳು ಮತ್ತು ಪ್ರಾಣಾಯಾಮಗಳನ್ನು ಅತ್ಯಂತ ವ್ಯವಸ್ಥಿತವಾಗಿ ಪ್ರದರ್ಶಿಸಿದರು. ಕೇವಲ ಆಸನಗಳ ಪ್ರದರ್ಶನಕ್ಕಷ್ಟೇ ಸೀಮಿತವಾಗದೆ, ಯೋಗದ ಮಹತ್ವವನ್ನು ಪ್ರಚಾರ ಪಡಿಸುವ ನಿಟ್ಟಿನಲ್ಲಿ ಮುಂದುವರಿಯಲಾಯಿತು.
Tags
ಬದಿಯಡ್ಕ
