ಇಂದು ಕಾಸರಗೋಡು, ಕಣ್ಣೂರು ಜಿಲ್ಲೆಗಳಲ್ಲಿ ವಿದ್ಯುತ್ ಮೊಟಕು ಸಾಧ್ಯತೆ



ಕೋಝಿಕ್ಕೋಡ್: 220 ಕೆವಿ ಅರೀಕೋಡ್ - ಕಾಂಞಿರೋಡ್ ಲೈನ್‌ನಲ್ಲಿ ತುರ್ತು  ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇಂದು (ಬುಧವಾರ) ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಭಾಗಶಃ ವಿದ್ಯುತ್ ಪೂರೈಕೆಗೆ ಅಡ್ಡಿಯಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗ್ರಾಹಕರು ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸಬೇಕೆಂದು ಕಣ್ಣೂರು ಟ್ರಾನ್ಸ್‌ಮಿಷನ್ ಸರ್ಕಲ್‌ನ ಡೆಪ್ಯುಟಿ ಚೀಫ್ ಇಂಜಿನಿಯರ್ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು