ಸೀತಾಂಗೋಳಿಯಿಂದ ನಾಪತ್ತೆಯಾದ ಯುವತಿ ಪಾಲಕ್ಕಾಡ್ ರೈಲ್ವೇ ನಿಲ್ದಾಣದಲ್ಲಿ ಪತ್ತೆ



ಕಾಸರಗೋಡು: ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯ ಸೀತಂಗೋಳಿಯಿಂದ ನಾಪತ್ತೆಯಾಗಿದ್ದ ಯುವತಿಯನ್ನು ಪಾಲಕ್ಕಾಡ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಹಚ್ಚಲಾಗಿದೆ. ಅಸ್ಸಾಂ ಮೂಲದ, ಸೀತಂಗೋಳಿ ಬೇವರೇಜಸ್ ಶಾಪ್ ಬಳಿ ವಾಸಿಸುತ್ತಿದ್ದ 23 ವರ್ಷದ ಯುವತಿಯನ್ನು ರೈಲ್ವೆ ಪೊಲೀಸರು ಪತ್ತೆಹಚ್ಚಿದ್ದಾರೆ. ಮಾಹಿತಿ ತಿಳಿದು ಪಾಲಕ್ಕಾಡ್‌ಗೆ ತೆರಳಿದ ಕುಂಬಳೆ ಪೊಲೀಸರು ಯುವತಿಯನ್ನು ಕರೆತಂದಿದ್ದಾರೆ. ಯುವತಿಯ ಸವಿಸ್ತಾರವಾದ ಹೇಳಿಕೆಯನ್ನು ದಾಖಲಿಸಿಕೊಂಡ ನಂತರ ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಬೆಳಿಗ್ಗೆ 10:30 ರ ಸುಮಾರಿಗೆ ಯುವತಿ ತಾನು ವಾಸಿಸುತ್ತಿದ್ದ ಕ್ವಾರ್ಟರ್ಸ್‌ನಿಂದ ಹೊರಗೆ ಹೋಗಿದ್ದಳು. ಆಕೆ ಮರಳಿ ಬಾರದ ಹಿನ್ನೆಲೆಯಲ್ಲಿ ಪತಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಕುಂಬಳೆ ಪೊಲೀಸರು, ನಾಪತ್ತೆಯಾದ ಯುವತಿಯನ್ನು ಗುರುತಿಸಲು ಅನುವಾಗುವಂತೆ ಮಾಹಿತಿಗಳನ್ನು ರಾಜ್ಯದ ಎಲ್ಲಾ ಪೊಲೀಸ್  ಠಾಣೆಗಳಿಗೂ ಮಾಹಿತಿ ನೀಡಲಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು