ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ


 ಪೆರ್ಲ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಲಾಯಿತು. ಕಾಲೇಜಿನ ಪ್ರಿನ್ಸಿಪಾಲ್ ಡಾ.ಮೋಹನ್ ಕುಂಟಾರು ಸಸಿ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಭವಿಷ್ಯದ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸಿಕೊಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕನಿಷ್ಠ ಒಂದು ಸಸಿಯನ್ನಾದರೂ ನೆಟ್ಟು ಆರೈಕೆ ಮಾಡಬೇಕು ಎಂದು ಅವರು ಹೇಳಿದರು. ಪರಿಸರ ಸಂರಕ್ಷಣೆ ಮತ್ತು ಹಸಿರು ವಾತಾವರಣಕ್ಕಾಗಿ ಕಾಲೇಜು ಆವರಣದಲ್ಲಿ ನಾನಾ ಜಾತಿಯ ಸಸಿಗಳನ್ನು ನೆಡಲಾಯಿತು. ಶಿಕ್ಷಕ ಸಿಬ್ಬಂದಿ ಸಹಕರಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು