ಕಾಸರಗೋಡು: ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಮಲಪ್ಪುರಂನ ಆತವನಾಡ್ ಕುರುಂಬತ್ತೂರು ನಿವಾಸಿ, ಮಣ್ಣತ್ ನಿವಾಸಿಯಾದ ಎಂ. ಕೆ. ಮುಹಮ್ಮದ್ ಬಂಧಿತ ಆರೋಪಿ. ಒಟ್ಟು 20 ಪ್ರಕರಣಗಳಲ್ಲಿ ಆರೋಪಿಯಾಗಿರುವ ಈತನನ್ನು ಬಿಹಾರದಿಂದ ವಳಾಂಚೇರಿ ಪೊಲೀಸರು ಬಂಧಿಸಿದ್ದಾರೆ. ಬಾಲಕರಿಂದ ಮಸಾಜ್ ಮಾಡಿಸಿಕೊಳ್ಳುವುದು ಈತನ ಶೈಲಿಯಾಗಿತ್ತು. ಹಲವು ಮಕ್ಕಳು ಭಯದಿಂದಾಗಿ ಈ ವಿಷಯವನ್ನು ಹೊರಗೆ ಹೇಳಿರಲಿಲ್ಲ.
ಕಾಸರಗೋಡು ಜಿಲ್ಲೆ ಬೇಕಲ ಪೊಲೀಸ್ ಠಾಣೆಯಲ್ಲಿ 2, ವಲಾಂಚೇರಿ ಪೊಲೀಸ್ ಠಾಣೆಯಲ್ಲಿ 14, ತಾನೂರಿನಲ್ಲಿ 4 ಪ್ರಕರಣಗಳು ಈತನ ವಿರುದ್ಧ ದಾಖಲಾಗಿವೆ. ದೂರುಗಳ ಆಧಾರದ ಮೇಲೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗುತ್ತಿದ್ದಂತೆ, ಈತ ಅಜ್ಮೀರ್‌ನಲ್ಲಿ ತಲೆಮರೆಸಿಕೊಂಡಿದ್ದನು. ಆದರೆ ಪೊಲೀಸರು ಅಲ್ಲಿಗೆ ತಲುಪುವಷ್ಟರಲ್ಲಿ ಬಿಹಾರಕ್ಕೆ ಪರಾರಿಯಾಗಿದ್ದನು. ವಿದೇಶಕ್ಕೆ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಈತನನ್ನು ಬಂಧಿಸಲಾಗಿದ್ದು, ಶೀಘ್ರದಲ್ಲೇ ಬೇಕಲಕ್ಕೆ ಕರೆತರಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
