ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಆಶ್ರಯ ಪಡೆದಿದ್ದ ನಾಯಿ ಮರಿಗಳ. ವಿಷವಿಕ್ಕಿ ಕೊಲೆ


 ಬದಿಯಡ್ಕ: ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರಲ್ಲಿ ಆಶ್ರಯ ಪಡೆದಿದ್ದ ನಾಲ್ಕು ನಾಯಿ ಮರಿಗಳಿಗೆ ವಿಷವಿಕ್ಕಿ ಕೊಂದಿರುವುದಾಗಿ ದೂರು ದಾಖಲಾಗಿದೆ. ಇದೇ ವೇಳೆ, ಜೊತೆಯಲ್ಲಿದ್ದ ದೊಡ್ಡ ನಾಯಿಗಳ ಮೇಲೆಯೂ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.

ಬೇಳ ಚೌಕಾರ್‌ನಲ್ಲಿ ಖಾಸಗಿ ನರ್ಸಿಂಗ್ ಕಾಲೇಜು ಒಂದಕ್ಕಾಗಿ ನಿರ್ಮಿಸಲಾಗುತ್ತಿರುವ ಕಟ್ಟಡದಲ್ಲಿದ್ದ ನಾಯಿ ಮರಿಗಳನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಭಾನುವಾರ ರಾತ್ರಿ 2 ಗಂಟೆಯಿಂದ ನಿನ್ನೆ (ಮಂಗಳವಾರ) ಬೆಳಿಗ್ಗೆ 8:30 ರ ನಡುವಿನ ಅವಧಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಕುರಿತು ಕಟ್ಟಡ ನಿರ್ಮಾಣದ ಉಸ್ತುವಾರಿ ವಹಿಸಿಕೊಂಡಿರುವ ಮಹಿಳೆ ನೀಡಿದ ದೂರಿನ ಮೇರೆಗೆ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು