ತಿರುವನಂತಪುರಂ: ಕೇರಳದಲ್ಲಿ ನೈಋತ್ಯ ಮುಂಗಾರು ಮಳೆ ತೀವ್ರಗೊಂಡಿದ್ದು, ರಾಜ್ಯದಾದ್ಯಂತ ಭಾರಿ ಮಳೆಯಾಗುತ್ತಿದೆ. ಮುಂಬರುವ ದಿನಗಳಲ್ಲಿ ಮಳೆ ಮತ್ತಷ್ಟು ಚುರುಕಾಗಲಿದ್ದು, ಹವಾಮಾನ ಇಲಾಖೆಯ ಮುನ್ನೆಚ್ಚರಿಕೆಯ ಮೇರೆಗೆ 8 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕಾಸರಗೋಡು, ಎರ್ನಾಕುಲಂ, ತೃಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಆಗಿರುತ್ತದೆ.
ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಆಗಿದೆ.
ನಾಳೆ ಪತ್ತನಂತಿಟ್ಟದಿಂದ ಕಾಸರಗೋಡುವರೆಗಿನ 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ ತಿರುವನಂತಪುರಂ, ಕೊಲ್ಲಂ ಮತ್ತು ಆಲಪ್ಪುಳ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸಮುದ್ರದಲ್ಲಿ ಬಲವಾದ ಗಾಳಿ ಮತ್ತು ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಕೇರಳ ಕರಾವಳಿಯಲ್ಲಿ ಮೀನುಗಾರಿಕೆಗೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗಿದೆ.
ಜೂನ್ 10 ರವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯಲಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಜಾಗರೂಕರಾಗಿರಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

