ತೀವ್ರಗೊಂಡ ಮುಂಗಾರು; ನಾಳೆ ಕಾಸರಗೋಡು ಸಹಿತ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್


 ತಿರುವನಂತಪುರಂ: ರಾಜ್ಯದಲ್ಲಿ ಮುಂಗಾರು ಮಳೆ ಇನ್ನಷ್ಟು ಬಿರುಸುಗೊಳ್ಳುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ನಾಳೆ (ಶನಿವಾರ) ಕಾಸರಗೋಡು ಸಹಿತ  5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಾಸರಗೋಡು, ಕಣ್ಣೂರು, ಕೋಜಿಕ್ಕೋಡು, ವಯನಾಡು, ಮಲಪ್ಪುರಂ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯ ಜತೆಗೆ 50 ಕಿ.ಮೀ ವೇಗದಲ್ಲಿ ಗಾಳಿಯೂ ಬೀಸಲಿದೆ. ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು