ಮುಳ್ಳೇರಿಯ: ಆದೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಡೂರು ಸಂಜಕಡವಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ (ಮಣ್ಣು ಕುಸಿತ) ಇಬ್ಬರು ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಇನ್ನೋರ್ವ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಚೆಂಗಳ ಇಂದಿರಾನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ (ಇಂದು) ಸಂಜೆ ಈ ಘಟನೆ ಸಂಭವಿಸಿದೆ. ಅಬೂಬಕ್ಕರ್ ಎಂಬುವವರ ಮಕ್ಕಳಾದ ಮುನ್ಸೀರ್ (10) ಮತ್ತು ಮುಜಮ್ಮಿಲ್ (14) ಮೃತಪಟ್ಟವರು.
Tags
ಮುಳ್ಳೇರಿಯ


