ನೀರ್ಚಾಲು: ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಯುವಕನೊಬ್ಬ ಮೃತಪಟ್ಟಿದ್ದಾರೆ. ನೀರ್ಚಾಲು ಸಮೀಪದ ಪುದುಕ್ಕೋಳಿ ಪರಿಶಿಷ್ಟ ಜಾತಿ ಉನ್ನತಿಯ ಉಮೇಶ್ (34) ಮೃತಪಟ್ಟವರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ತಿಂಗಳುಗಳಿಂದ ತಲಶ್ಶೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರು ಬಾಲಕೃಷ್ಣನ್ ಮತ್ತು ಲಕ್ಷ್ಮಿ ದಂಪತಿಯ ಪುತ್ರರಾಗಿದ್ದಾರೆ. ಮೃತರು ಅವಿವಾಹಿತರಾಗಿದ್ದು, ಸಹೋದರ ಅಭಿಲಾಷ್ ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
Tags
ನೀರ್ಚಾಲು
