ಗುರು ಪೂರ್ಣಿಮೆ ದಿನವಾದ ಇಂದು ಬೆಳಿಗ್ಗೆ ಭಾರತೀಯ ಜನತಾ ಪಕ್ಷದ ಬದಿಯಡ್ಕ ಮಂಡಲ ಸಮಿತಿಯ ನೇತೃತ್ವದಲ್ಲಿ ಶ್ರೀ ಎರಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಅವರಿಗೆ ಗುರುವಂದನೆ ನಡೆಸಿ ಶ್ರೀ ಗುರುಗಳ ಆಶೀರ್ವಾದ ಪಡೆಯಲಾಯಿತು.
ಕುಂಬ್ಡಾಜೆ ಗ್ರಾಮ ಪಂಚಾಯತು ಅಧ್ಯಕ್ಷೆ ಶ್ರೀಮತಿ ಯಶೋಧ, ಕುಂಬ್ಡಾಜೆ ಗ್ರಾಮಪಂಚಾಯತು ಸ್ಥಾಯಿ ಸಮಿತಿ ಅಧ್ಯಕ್ಷೆ ನಯನ, ಗ್ರಾಮ ಪಂಚಾಯತು ಸದಸ್ಯರುಗಳಾದ ಮಹೇಶ್ ಅಜ್ಜಿಮೂಲೆ, ಸೌಭಾಗ್ಯಲಕ್ಷ್ಮಿ, ಚೆಂಗಳ ಪಂಚಾಯತು ಸಮಿತಿ ಪ್ರಧಾನ ಕಾರ್ಯದರ್ಶಿ ಉಮೇಶ್ ಐಲಕುಂಜೆ ಮೊದಲಾದವರು ಉಪಸ್ಥಿತರಿದ್ದರು.
Tags
ಎಡನೀರು


