ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆಯಲಿರುವ ರೂಪಶ್ರೀ ವರ್ಕಾಡಿ ಅವರಿಗೆ ಬಿಜೆಪಿ ವತಿಯಿಂದ ಅಭಿನಂದನೆ


 ವರ್ಕಾಡಿ: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾಗಿರುವ ರೂಪಶ್ರೀ ವರ್ಕಾಡಿ ಅವರಿಗೆ ಭಾರತೀಯ ಜನತಾ ಪಾರ್ಟಿ, ವರ್ಕಾಡಿ ಸಮಿತಿ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಮಣಿಕಂಠ ರೈ ಪಟ್ಲ, ಬಿಜೆಪಿ ರಾಜ್ಯ ಕೌನ್ಸಿಲ್ ಸದಸ್ಯ ಹರೀಶ್ ನಾರಂಪಾಡಿ, ಮಂಜೇಶ್ವರ ಮಂಡಲ ಪ್ರಧಾನ ಕಾರ್ಯದರ್ಶಿ ಯತೀರಾಜ್ ಶೆಟ್ಟಿ, ವರ್ಕಾಡಿ ಗ್ರಾಮ ಪಂಚಾಯತ್ ಸದಸ್ಯೆ ತುಳಸಿ ಕುಮಾರಿ, ವರ್ಕಾಡಿ ಬಿಜೆಪಿ ಸಮಿತಿಯ ಅಧ್ಯಕ್ಷ ಭಾಸ್ಕರ್ ಪೊಯ್ಯೇ, ಪ್ರಧಾನ ಕಾರ್ಯದರ್ಶಿಗಳಾದ ನಾಗೇಶ್ ಬಳ್ಳೂರ್ ಹಾಗೂ ಕೃಷ್ಣಮೂರ್ತಿ ನೂಜಿ, ಮುಖಂಡರಾದ ರಕ್ಷಣ್ ಅಡೆಕಳಕಟ್ಟೆ, ಪ್ರಶಾಂತ್, ರವಿರಾಜ್ ಸೇರಿದಂತೆ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರೂಪಶ್ರೀ ವರ್ಕಾಡಿ ಅವರ ಸಾಧನೆಯನ್ನು ಶ್ಲಾಘಿಸಿ, ರಾಷ್ಟ್ರೀಯ ಮಟ್ಟದಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡುವಂತೆ ಶುಭ ಹಾರೈಸಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು