ಹೆಚ್1ಎನ್1 ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಗೃಹಿಣಿ ಮೃತ್ಯು



ಕಾಸರಗೋಡು: ಹೆಚ್1ಎನ್1 (H1N1) ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಗೃಹಿಣಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಅಜಾನೂರು ಮಾಣಿಕೋತ್‌ನ ಕರುಣಾಕರನ್ ಅವರ ಪತ್ನಿ ಯಶೋದಾ ಮೃತಪಟ್ಟವರು. ತೀವ್ರ ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಯಶೋದಾ ಅವರನ್ನು ಮೊದಲು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್1ಎನ್1 ರೋಗಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು. ಮೂರು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾಗ ಸಾವು ಸಂಭವಿಸಿದೆ.

ಇವರೊಂದಿಗೆ ನಿಕಟ ಸಂಪರ್ಕದಲ್ಲಿದ್ದ ಏಳು ಜನರಲ್ಲಿ ಜ್ವರ ಮತ್ತು ಕೆಮ್ಮು ಸೇರಿದಂತೆ ರೋಗಲಕ್ಷಣಗಳು ಕಂಡುಬಂದಿದ್ದು, ಅವರ ಗಂಟಲಿನ ದ್ರವದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರದೇಶದಲ್ಲಿ ಜಾಗರೂಕರಾಗಿರಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಜಿಲ್ಲೆಯಲ್ಲಿ ಅಮೀಬಿಕ್ ಮಿದುಳು ಜ್ವರ (Amebic encephalitis) ಕೂಡ ವರದಿಯಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು