ಪ್ರಧಾನಿ ಬಗ್ಗೆ ಅವಹೇಳನಕಾರಿ ಪೋಸ್ಟ್; ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಮಹಿಳಾ ಮೋರ್ಚಾ ದೂರು ದಾಖಲು


ಬದಿಯಡ್ಕ: ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ತಾಯಿಯ ಬಗ್ಗೆ ನಿಂದನೀಯ, ಅವಮಾನಕರ ಮತ್ತು ಪ್ರಾಥಮಿಕ ಮಾನಹಾನಿಕರ ಹೇಳಿಕೆಗಳನ್ನು ಹೊಂದಿರುವ ಸಾಮಾಜಿಕ ಮಾಧ್ಯಮದ ವೀಡಿಯೊವನ್ನು ಪ್ರಕಟಿಸಿದ ಮತ್ತು ಪ್ರಸಾರ ಮಾಡಿದ ವ್ಯಕ್ತಿಯ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರುಗಳು ದಾಖಲಾಗಿವೆ. ಬದಿಯಡ್ಕದಲ್ಲಿ ಮಹಿಳಾ ಮೊರ್ಚಾ ವತಿಯಿಂದ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಲಾಯಿತು. ಜಿಲ್ಲಾ ಕಾರ್ಯದರ್ಶಿ, ಬಿಜೆಪಿ ಮಹಿಳಾಮೋರ್ಚ ಮಂಡಲ ಅಧ್ಯಕ್ಷೆ ಪ್ರೇಮ ಕುಮಾರಿ ಬೇಳ, ಬದಿಯಡ್ಕ ಗ್ರಾಮಪಂಚಾಯಿತಿ ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ.,ಜಯಂತಿ ಚೆಟ್ಟಿಯಾರ್, ಜಗದಂಬಾ, ಪುಷ್ಪ, ಹರಿಣಾಕ್ಷಿ ಜೊತೆಗಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು