ಕಾಡುಕೋಣದ ದಾಳಿಯಿಂದ ಗಂಭೀರ ಗಾಯಗೊಂಡ ವ್ಯಕ್ತಿ ಮೃತ್ಯು


  ಕಾಡುಕೋಣದ ದಾಳಿಯಿಂದ ವೃದ್ಧರೊಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ . ಕೊಲ್ಲಂ ಕುಳತ್ತುಪುಯ   ಬೀಮಾ ಮಂಜಿಲ್‌ನ ಬಶೀರ್ (68) ಮೃತಪಟ್ಟವರು. ಇಂದು (ಗುರುವಾರ) ಮುಂಜಾನೆ ಈ ದುರ್ಘಟನೆ ನಡೆದಿದೆ.

ಬಶೀರ್ ಅವರು ಕುಳತ್ತುಪುಳ ಜಂಕ್ಷನ್‌ಗೆ ನಡೆದುಕೊಂಡು ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.  ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಅವರು ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಜನವಸತಿ ಪ್ರದೇಶಕ್ಕೆ ನುಗ್ಗಿದ ಕಾಡುಕೋಣ ವ್ಯಕ್ತಿಯೊಬ್ಬರ ಜೀವ ತೆಗೆದಿರುವುದರಿಂದ ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು