ತಿರುವನಂತಪುರಂ: ರಾಜ್ಯದಲ್ಲಿ ಇಂದು ಅತಿ ತೀವ್ರಮಳೆ ಹಾಗೂ ಬಲವಾದ ಗಾಳಿ ಬೀಸಲಿದೆಯೆಂದು ಕೇಂದ್ರ ಹವಾಮಾನ ಇಲಾಖೆ ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ 5 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಿದ್ದು 3 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.
ಕಾಸರಗೋಡು, ಕಣ್ಣೂರು, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್ ಜಿಲ್ಲೆಗಳಲ್ಲಿ ಇಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮಲಪ್ಪುರಂ, ಕೋಝಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆಯನ್ನು ಪರಿಗಣಿಸಿ, ಆಯಾ ಜಿಲ್ಲಾಧಿಕಾರಿಗಳು ಇಂದು (ಗುರುವಾರ) ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ. ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೂ ರಜೆ ನೀಡಲಾಗಿದೆ. ನಿನ್ನೆ ಸಂಜೆ ಮಲಪ್ಪುರಂ, ಕೋಝಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್ ಘೋಷಿಸಲಾಗಿತ್ತು. ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆಯೆಂದು ಸಹ ಹವಾಮಾನ ಇಲಾಖೆ ವರದಿ ಮಾಡಿದೆ.
Tags
ತಿರುವನಂತಪುರಂ
