ಇಲಿ ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಕೋಜಿಕ್ಕೋಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವತಿ ಮೃತ್ಯು



 ಕಾಸರಗೋಡು:  ಇಲಿ ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಕೂಡ್ಲು, ಚೆಟ್ಟುಂಗುಯಿ ಇಜ್ಜತ್ ನಗರದ ಎಸ್‌ಎಂ ಮಂಜಿಲ್‌ನ ಅಬ್ದುಲ್ ಮನಾಫ್ ಎಂಬವರ ಪುತ್ರಿ ಆಮಿನಾ ನುಸಾ (18) ಮೃತಪಟ್ಟ ದುರ್ದೈವಿ. ಇಂದು (ಸೋಮವಾರ) ಮುಂಜಾನೆ ಒಂದು ಗಂಟೆಯ ಸುಮಾರಿಗೆ ಕೋಜಿಕ್ಕೋಡು ಖಾಸಗಿ ಆಸ್ಪತ್ರೆಯಲ್ಲಿ ಆಕೆ ಕೊನೆಯುಸಿರೆಳೆದಿದ್ದಾಳೆ.

ಜೂನ್ 25 ರಂದು ಆಮಿನಾ ನುಸಾ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಹಿನ್ನೆಲೆಯಲ್ಲಿ ಆಕೆಯನ್ನು ಚೆಂಗಳ, ಇಂದಿರಾನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಕೋಜಿಕ್ಕೋಡು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಈ ಘಟನೆಗೆ ಸಂಬಂಧಿಸಿದಂತೆ ಕಾಸರಗೋಡು ಟೌನ್ ಪೊಲೀಸರು ಕೇಸು ದಾಖಲಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು