ಕಾಸರಗೋಡು: ಇಲಿ ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಕೋಜಿಕ್ಕೋಡು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದ ಯುವತಿ ಮೃತಪಟ್ಟ ಘಟನೆ ನಡೆದಿದೆ.. ವೆಳ್ಳರಿಕ್ಕುಂಡ್ ಆನಮಂಜಲ್ ನಿವಾಸಿ ಸತೀಶ ಎಂಬವರ ಪತ್ನಿ ದೀಪಾ (23) ಮೃತಪಟ್ಟವರು. ಐದು ದಿನಗಳ ಹಿಂದೆ ಗಂಡನ ಮನೆಯಲ್ಲಿ ಯುವತಿ ಇಲಿ ವಿಷ ಸೇವಿಸಿದ್ದರು. ತಕ್ಷಣವೇ ಅವರನ್ನು ಪೆರಿಯಾರಂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರಿಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಕೋಝಿಕೋಡ್‌ಗೆ ಸ್ಥಳಾಂತರಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ (ಗುರುವಾರ) ರಾತ್ರಿ ಕೋಝಿಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು. ಅಂತ್ಯಕ್ರಿಯೆ ಶುಕ್ರವಾರ ನಡೆಯಲಿದೆ. ಮೃತರು ಪತಿ, ತಂದೆ ಪದ್ಮನಾಭನ್, ತಾಯಿ ಬಿಂದು, ಮಕ್ಕಳಾದ ಶ್ರೀದೀಪ, ಶ್ರೀಯಾಂ ದೇವ್ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
Tags
ಕಾಸರಗೋಡು
