ಬಿಜೆಪಿಯ ಕಾಸರಗೋಡು ಜಿಲ್ಲಾ ಕಾರ್ಯಾಲಯವಾದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಮಂದಿರದಲ್ಲಿ ಯುವ ಮೋರ್ಚಾ ನೇತೃತ್ವದಲ್ಲಿ ಸ್ವರ್ಗೀಯ ಸುಷ್ಮಾ ಸ್ವರಾಜ್ ಅವರ ಸಂಸ್ಮರಣೆ ಮತ್ತು ಪುಷ್ಪಾರ್ಚನೆ ಕಾರ್ಯಕ್ರಮ ನಡೆಯಿತು.
ಬಿಜೆಪಿ ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್., ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್. ಸುನಿಲ್, ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವರುಣ್ ಪ್ರಸಾದ್, ರಾಜ್ಯ ಉಪಾಧ್ಯಕ್ಷೆ ಶ್ರುತಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಅಶ್ವಿನ್ ಕೊಲ್ಲಾಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅದ್ವೈತ್, ಧನುಷ್ ಹೆಚ್.ಎನ್., ಶ್ರುತಿ ವಿನೋದ್ ಹಾಗೂ ಜಿಲ್ಲಾ ಸಮಿತಿ ಸದಸ್ಯೆ ಸುಮಿ ಮುಂತಾದವರು ಉಪಸ್ಥಿತರಿದ್ದರು.
Tags
ಕಾಸರಗೋಡು
