ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ; ನಾಳೆ ಧಾರ್ಮಿಕ ಅಧ್ಯಯನ ಕೇಂದ್ರಗಳು, ಟ್ಯೂಶನ್ ಸೆಂಟರುಗಳು, ಇತರ ಶಿಕ್ಷಣ ಸಂಸ್ಥೆಗಳಿಗೆ ರಜೆ


ಕಾಸರಗೋಡು: ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿರುವುದರಿಂದ ಭಾನುವಾರದಂದು ಮದ್ರಸಗಳು ಸೇರಿದಂತೆ ಧಾರ್ಮಿಕ ಅಧ್ಯಯನ ಕೇಂದ್ರಗಳು, ಟ್ಯೂಷನ್ ಸಂಸ್ಥೆಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಿಗೆ ರಜೆ ಇರಲಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಭಾನುವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಮಳೆಗೆ ಸಂಬಂಧಿಸಿದ ಮಾಹಿತಿಯನ್ನು ನೀಡಲು ಮತ್ತು ಯಾವುದೇ ಸಮಯದಲ್ಲಿ ನೆರವು ಪಡೆಯಲು 24 ಗಂಟೆಗಳ ಕಾಲ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಮ್ ಅನ್ನು ಪ್ರಾರಂಭಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು