ನೀರ್ಚಾಲು: ಕಿಳಿಂಗಾರು ಎ.ಎಲ್ ಪಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಬದಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಶಂಕರ ಡಿ ಅವರು ದ್ವಜಾರೋಹಣಗೈದರು .
ಶಾಲಾ ವ್ಯವಸ್ಥಾಪಕರಾದ ಶ್ರೀ ಕೆ.ಎನ್ ಕೃಷ್ಣಭಟ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶ್ರೀವಿದ್ಯಾ ಎ , ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಸುಬ್ರಾಯ ಭಟ್, ಶ್ರೀ ಉದನೇಶವೀರ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ವಿಷ್ಣು ಪ್ರಕಾಶ್ ಪೆರ್ವ, ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಪ್ರೀತಾ ಕೆ, ಶುಭ ಹಾರೈಸಿದರು. ಶಾಲಾ ಅಧ್ಯಾಪಕ ಅಧ್ಯಾಪಿಕೆಯರು ಶಾಲಾ ಮಕ್ಕಳು ಹಳೆವಿದ್ಯಾರ್ಥಿಗಳು ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Tags
ನೀರ್ಚಾಲು

