ಕುಂಟಿಕಾನ ಶಾಲೆಯಲ್ಲಿ ಉಪಜಿಲ್ಲಾ ಹ್ಯಾಂಡ್‌ಬಾಲ್ ಚಾಂಪಿಯನ್‌ಶಿಪ್


 ಕುಂಟಿಕಾನ: ಎಎಸ್‌ಬಿಎಸ್ ಕುಂಟಿಕಾನ ಶಾಲಾ ಮೈದಾನದಲ್ಲಿ ಕುಂಬಳೆ ಉಪಜಿಲ್ಲಾ ಮಟ್ಟದ ಸಬ್‌ಜೂನಿಯರ್ ಹ್ಯಾಂಡ್‌ಬಾಲ್ ಚಾಂಪಿಯನ್‌ಶಿಪ್ ಸೋಮವಾರ ನಡೆಯಿತು. ಬಾಲಕರ ವಿಭಾಗದಲ್ಲಿ ಆರು ಶಾಲೆಗಳ ತಂಡಗಳು ಹಾಗೂ ಬಾಲಕಿಯರ ವಿಭಾಗದಲ್ಲಿ ನಾಲ್ಕು ಶಾಲೆಗಳ ತಂಡಗಳು ಭಾಗವಹಿಸಿದವು.

ಬಾಲಕರ ಹಾಗೂ ಬಾಲಕಿಯರ ಎರಡೂ ವಿಭಾಗಗಳಲ್ಲಿ NHS ಪೆರಡಾಲ ಪ್ರಥಮ ಸ್ಥಾನ ಪಡೆದುಕೊಂಡರೆ, GSBS ಕುಂಬಳೆ ದ್ವಿತೀಯ ಸ್ಥಾನ ಗಳಿಸಿತು. ಬಾಲಕರ ವಿಭಾಗದಲ್ಲಿ ASBS ಕುಂಟಿಕಾನ ತೃತೀಯ ಸ್ಥಾನ ಪಡೆದರೆ, ಬಾಲಕಿಯರ ವಿಭಾಗದಲ್ಲಿ JASBS ಮಾನ್ಯ ತೃತೀಯ ಸ್ಥಾನ ಪಡೆದುಕೊಂಡಿತು.

ವಿವಿಧ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಉತ್ತಮ ಕ್ರೀಡಾ ಪ್ರತಿಭೆ ಹಾಗೂ ಕ್ರೀಡಾಸ್ಫೂರ್ತಿಯನ್ನು ಪ್ರದರ್ಶಿಸಿದರು. ಪಂದ್ಯಾವಳಿಯನ್ನು ಅಚ್ಚುಕಟ್ಟಾಗಿ ಹಾಗೂ ಶಿಸ್ತುಬದ್ಧವಾಗಿ ನಡೆಸಲಾಯಿತು. ಶಿಕ್ಷಕರು, ಕ್ರೀಡಾ ಶಿಕ್ಷಕರು ಹಾಗೂ ಸಿಬ್ಬಂದಿಯ ಸಹಕಾರದಿಂದ ಚಾಂಪಿಯನ್‌ಶಿಪ್ ಯಶಸ್ವಿಯಾಗಿ ಸಂಪನ್ನಗೊಂಡಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು