ಉಳಿಯತ್ತಡ್ಕದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಉಪನ್ಯಾಸ ನೀಡಿದರು. ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರವೇ ಭಾರತಕ್ಕೆ ಪೂರ್ಣಾರ್ಥದಲ್ಲಿ ಸ್ವಾತಂತ್ರ್ಯ ಲಭಿಸಿದೆ ಎಂದು ಹೇಳಿದ ಅವರು, ನಮ್ಮ ದೇಶವು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃತಜ್ಞವಾಗಿದೆ ಎಂದರು.
ಮಹಿಳಾ ಮೋರ್ಚಾ ಮಂಡಲ ಅಧ್ಯಕ್ಷೆ ಶ್ರೀವಿದ್ಯಾ ಅಧ್ಯಕ್ಷತೆ ವಹಿಸಿದ್ದರು.ಬಿಜೆಪಿ ರಾಜ್ಯ ಸಮಿತಿ ಸದಸ್ಯೆ ಸವಿತಾ ಟೀಚರ್, ಜಿಲ್ಲಾ ಕಾರ್ಯದರ್ಶಿಗಳಾದ ಪುಷ್ಪ ಗೋಪಾಲನ್, ಪ್ರಮೀಳಾ ಮಜಲ್, ಜಿಲ್ಲಾ ಕೋಶಾಧಿಕಾರಿ ವೀಣಾ ಅರುಣ್ ಶೆಟ್ಟಿ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿತಾ ಆರ್. ನಾಯ್ಕ್, ಮಹಿಳಾ ಮೋರ್ಚಾ ಜಿಲ್ಲಾ ಕೋಶಾಧಿಕಾರಿ ಶ್ರೀಲತಾ ಟೀಚರ್, ಜಿಲ್ಲಾ ಕಾರ್ಯದರ್ಶಿಗಳಾದ ಮಮತಾ ಸಾಗರ್, ಮಂಡಲ ಪ್ರಧಾನ ಕಾರ್ಯದರ್ಶಿ ಚೇತನಾ, ಕಾರ್ಯದರ್ಶಿ ಅಶ್ವಿತಾ, ಮಧೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜ್ಞಾನಿ ಶಾನ್‌ಭಾಗ್ ಮುಂತಾದವರು ಮಾತನಾಡಿದರು.
ತಾಳಿಪಡ್ಪು ಮೈದಾನದಲ್ಲಿ ಮಹಿಳಾ ಮೋರ್ಚಾ ಕಾಸರಗೋಡು ಜಿಲ್ಲಾ ಅಧ್ಯಕ್ಷೆ ಕೆ.ಎಸ್. ರಮಣಿ ಅವರು ಮಂಡಲ ಅಧ್ಯಕ್ಷೆ ಶ್ರೀವಿದ್ಯಾ ಅವರಿಗೆ ರಾಷ್ಟ್ರಧ್ವಜ ಹಸ್ತಾಂತರಿಸಿದರು.
ಮೊಗ್ರಾರ್ ಪುತ್ತೂರು, ಕಾಸರಗೋಡು ಮುನ್ಸಿಪಾಲಿಟಿ ಹಾಗೂ ಮಧೂರು ಪ್ರದೇಶಗಳ ಮೂಲಕ ಬೈಕ್ ರಾಲಿ ಸಾಗಿತು.

