ತಿರುವನಂತಪುರಂ: ರಾಜ್ಯದಲ್ಲಿ ಓಣಂ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯನ್ನೂ ಹವಾಮಾನ ಇಲಾಖೆ ಅಂದಾಜಿಸಿದೆ.
ಪಶ್ಚಿಮ ಬಂಗಾಳ–ಬಾಂಗ್ಲಾದೇಶ ಕರಾವಳಿ ಸಮೀಪದ ಉತ್ತರ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ (Cyclonic Circulation) ರೂಪುಗೊಂಡಿದೆ. ಮುಂದಿನ 24 ಗಂಟೆಗಳಲ್ಲಿ ಇದು ವಾಯುಭಾರ ಕುಸಿತವಾಗಿ ಬಲಗೊಳ್ಳುವ ಸಾಧ್ಯತೆ ಇದೆ.
ಇಂದಿನಿಂದ ಆಗಸ್ಟ್ 26ರವರೆಗೆ ರಾಜ್ಯದಲ್ಲಿ ಹಗುರದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 23, 24 ಮತ್ತು 25ರಂದು ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
ನಾಳೆ (ಆದಿತ್ಯವಾರ) ಕಾಸರಗೋಡು, ಕಣ್ಣೂರು, ವಯನಾಡು, ಕೋಜಿಕ್ಕೋಡು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಸೋಮವಾರ ದಂದು ಪತ್ತನಂತಿಟ್ಟ, ಕೊಟ್ಟಯಂ, ಇಡುಕ್ಕಿ,ಎರ್ನಾಕುಲಂ, ತ್ರಿಶೂರ್ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ.
ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. 24 ಗಂಟೆಗಳಲ್ಲಿ 64.5 ಮಿ.ಮೀ.ಯಿಂದ 115.5 ಮಿ.ಮೀ.ವರೆಗೆ ಮಳೆಯಾದರೆ ಅದನ್ನು ಭಾರಿ ಮಳೆ ಎಂದು ಪರಿಗಣಿಸಲಾಗುತ್ತದೆ.
Tags
ತಿರುವನಂತಪುರಂ
