ಕಾಸರಗೋಡು: ಕೇಂದ್ರ ಹವಾಮಾನ ಇಲಾಖೆಯು ನಾಳೆ (ಆಗಸ್ಟ್ 8) ಕಾಸರಗೋಡು ಜಿಲ್ಲೆಯಲ್ಲಿ ಅತ್ಯಧಿಕ ಮಳೆಯ ಎಚ್ಚರಿಕೆಯನ್ನು (Orange Alert) ನೀಡಿರುವ ಹಿನ್ನೆಲೆಯಲ್ಲಿ, ಮಕ್ಕಳ ಸುರಕ್ಷತೆಯನ್ನು ಮುನ್ನೆಚ್ಚರಿಕೆಯಾಗಿ ಪರಿಗಣಿಸಿ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಶಾಲೆಗಳು, ಕಾಲೇಜುಗಳು, ಧಾರ್ಮಿಕ ಅಧ್ಯಯನ ಕೇಂದ್ರಗಳು ಮತ್ತು ಟ್ಯೂಷನ್ ಸೆಂಟರ್‌ಗಳು ಸೇರಿದಂತೆ ಯಾವುದೇ ರೀತಿಯ ಶಿಕ್ಷಣ ಸಂಸ್ಥೆಗಳು ನಾಳೆ ಕಾರ್ಯನಿರ್ವಹಿಸುವಂತಿಲ್ಲ. ಆದರೆ, ಮುಂಚಿತವಾಗಿ ನಿಗದಿಪಡಿಸಿದ ಸಾರ್ವಜನಿಕ ಪರೀಕ್ಷೆಗಳು ಮತ್ತು ಸಂದರ್ಶನಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲವೆಂದು ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ತಿಳಿಸಿದ್ದಾರೆ.
Tags
ಕಾಸರಗೋಡು
