ಪೆರ್ಲ: ಇಲ್ಲಿನ ಪ್ರಸಿದ್ಧ ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಲ್ತಿ) ವಿಷ್ಣುಮೂರ್ತಿ ಕ್ಷೇತ್ರದಲ್ಲಿ ಶ್ರೀ ಉಳ್ಳಾಲ್ತಿ ಮಹಿಳಾ ಸಂಘದ ಆಶ್ರಯದಲ್ಲಿ 18ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜಾ ಮಹೋತ್ಸವವು ಶುಕ್ರವಾರ ಶ್ರದ್ಧಾ-ಭಕ್ತಿಯಿಂದ ನೆರವೇರಿತು.
ವೇ.ಮೂ. ಶ್ರೀಧರ ಭಟ್ ಸಜಂಗದ್ದೆ ಅವರ ಪೌರೋಹಿತ್ಯದಲ್ಲಿ ವರಮಹಾಲಕ್ಷ್ಮಿ ಪೂಜೆಯ ಅಂಗವಾಗಿ ವಿಶೇಷ ಧಾರ್ಮಿಕ ವಿಧಿ-ವಿಧಾನಗಳು, ಕಲಶ ಸ್ಥಾಪನೆ, ಕಲ್ಪೋಕ್ತ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿದವು.
ನಾಡಿನ ಸುಭಿಕ್ಷೆ ಹಾಗೂ ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸಿ ನಡೆದ ವಿಶೇಷ ಪೂಜೆಯಲ್ಲಿ ನೂರಾರು ಮಹಿಳೆಯರು ಹಾಗೂ ಭಕ್ತಾದಿಗಳು ಪಾಲ್ಗೊಂಡರು.
ಧಾರ್ಮಿಕ ಕಾರ್ಯಕ್ರಮಗಳ ಬಳಿಕ ಭಕ್ತರಿಗೆ ತೀರ್ಥ ಪ್ರಸಾದ ಹಾಗೂ ಅನ್ನಪ್ರಸಾದ ವಿತರಿಸಲಾಯಿತು. ಪೂಜಾ ಮಹೋತ್ಸವದ ಯಶಸ್ಸಿಗೆ ಶ್ರೀ ಉಳ್ಳಾಲ್ತಿ ಮಹಿಳಾ ಸಂಘದ ಪದಾಧಿಕಾರಿಗಳು ಹಾಗೂ ಕ್ಷೇತ್ರದ ಭಕ್ತರು ಸಕ್ರಿಯವಾಗಿ ಸಹಕರಿಸಿದರು.
Tags
ಪೆರ್ಲ
.jpeg)
