ಬೆಳ್ಳೂರು ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ವ್ಯಾಪಕಗೊಂಡ ಕಳ್ಳತನ; ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಗ್ರಾಮ ಪಂಚಾಯತು ಅಧ್ಯಕ್ಷರ ನೇತೃತ್ವದ ನಿಯೋಗ


 ಬೆಳ್ಳೂರು: ಬೆಳ್ಳೂರು ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸರಣಿ ಕಳ್ಳತನ ವ್ಯಾಪಕವಾಗುತ್ತಿದ್ದು ಈ ಬಗ್ಗೆ ತ್ವರಿತ ಕ್ರಮ ಕೈಗೊಳ್ಳಬೇಕೆಂದು ಗ್ರಾಮ ಪಂಚಾಯತು ಅಧ್ಯಕ್ಷರ ನೇತೃತ್ವದ ನಿಯೋಗ ಒತ್ತಾಯಿಸಿದೆ.  ಗ್ರಾಮ ಪಂಚಾಯತು ಅಧ್ಯಕ್ಷರಾದ ಮಾಲಿನಿ. ಎ  ಈ ಬಗ್ಗೆ ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗೆ ದೂರು ನೀಡಿದರು.. ಕ್ಷೇಮಕಾರ್ಯ ಸ್ಥಾಯೀ ಸಮಿತಿ ಅಧ್ಯಕ್ಷ ಸುಕುಮಾರ ಮತ್ತು ವಾರ್ಡು ಮೆಂಬರ್ ಶ್ರೀಧರ ಎಂ ಜತೆಗಿದ್ದರು. ಬೆಳ್ಳೂರು ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಇತ್ತೀಚೆಗೆ ಅಡಿಕೆ, ರಬ್ಬರ್ ಶೀಟ್ ಹಾಗೂ ಇತರ ಕಳ್ಳತನ ವ್ಯಾಪಕವಾಗುತ್ತಿದೆ. ಈ ಬಗ್ಗೆ ಆದೂರು ಪೊಲೀಸರಿಗೆ ದೂರು ನೀಡಿದ್ದರೂ ಕಳ್ಳರನ್ನು ಬಂಧಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತು ಅಧ್ಯಕ್ಷರ ನೇತೃತ್ವದ ನಿಯೋಗ ಪೊಲೀಸ್ ವರಿಷ್ಠಾಧಿಕಾರಿಗಳಿಗೆ‌ ಮನವಿ ಸಲ್ಲಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು