ಬಿಜೆಪಿ ಆಶ್ರಯದಲ್ಲಿ ಸೇವಾ ಸಂಕಲ್ಪ ಅಭಿಯಾನ ಜಿಲ್ಲಾ ಕಾರ್ಯಾಗಾರ ಆಯೋಜನೆ


ಕಾಸರಗೋಡು: ನರೇಂದ್ರ ಮೋದಿ ಜಿ ಅವರು ಜನಸೇವೆಯ ಹಾದಿಯಲ್ಲಿ 25 ವರ್ಷಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ರಾಷ್ಟ್ರಮಟ್ಟದಲ್ಲಿ ಆಯೋಜಿಸಲಾಗುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ, ಬಿಜೆಪಿ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಮತ್ತು ಮಂಡಲ ಉಪ ಸಮಿತಿ ಸದಸ್ಯರಿಗಾಗಿ ಡಾ. ಶ್ಯಾಮಪ್ರಸಾದ್ ಮುಖರ್ಜಿ ಮಂದಿರದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಬಿಜೆಪಿ ಕಣ್ಣೂರು ಮೇಘಲ ಪ್ರಭಾರಿ ಹಾಗೂ ಬಿಜೆಪಿ ರಾಜ್ಯ ಸೆಲ್ ಸಂಯೋಜಕರಾದ ಅಡ್ವ. ವಿ.ಕೆ. ಸಜೀವನ್ ಅವರು ಕಾರ್ಯಾಗಾರವನ್ನು ಉದ್ಘಾಟಿಸಿದರು.


ಚುನಾಯಿತ
ನಾದ ಆಡಳಿತಗಾರರಾಗಿ ಕಾಲು ಶತಮಾನ ಪೂರೈಸಿರುವ ನರೇಂದ್ರ ಮೋದಿಯವರು ವಿಶ್ವ ನಾಯಕರ ಸಾಲಿನಲ್ಲಿಯೇ ಅತ್ಯಂತ ಪ್ರಬಲ ಆಡಳಿತಗಾರ ಎಂಬ ಸ್ಥಾನಕ್ಕೆ ತಲುಪಿದ್ದಾರೆ. ನರೇಂದ್ರ ಮೋದಿಯವರನ್ನು ಅಧಿಕಾರದಿಂದ ಕೆಳಗಿಳಿಸಲು ಮತ್ತು ವಿವಿಧ ಪ್ರತಿಭಟನಾ ಕಾರ್ಯಕ್ರಮಗಳ ಮೂಲಕ ಸರ್ಕಾರದ ಗಮನವನ್ನು ಬೇರೆಡೆ ಸೆಳೆಯಲು ವಿರೋಧ ಪಕ್ಷಗಳು ಯೋಜಿತ ಪ್ರಯತ್ನ ನಡೆಸಿದರೂ, ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ದೇಶಾದ್ಯಂತ ಭಾರಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಪಾಕ್ ಭಯೋತ್ಪಾದಕ ಜಾಲದ ಕೊಂಡಿಗಳನ್ನು ಬಂಧಿಸುವ ಮೂಲಕ ಅಭಿವೃದ್ಧಿ ಹಾಗೂ ರಾಷ್ಟ್ರ ರಕ್ಷಣೆಯ ವಿಷಯದಲ್ಲಿ ನರೇಂದ್ರ ಮೋದಿ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂಬುದು ಸಾಬೀತಾಗಿದೆ ಎಂದು ವಿ.ಕೆ. ಸಜೀವನ್ ಉದ್ಘಾಟನಾ ಭಾಷಣದಲ್ಲಿ ಹೇಳಿದರು.


2026 - 27 ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತವು ಸಾಧಿಸಿದ 7.8% ಆಂತರಿಕ ಬೆಳವಣಿಗೆಯು ನರೇಂದ್ರ ಮೋದಿ ಸರ್ಕಾರ ಸರಿಯಾದ ದಿಕ್ಕಿನಲ್ಲಿದೆ ಎಂಬುದನ್ನು ನಿಸ್ಸಂದೇಹವಾಗಿ ಸಾಬೀತುಪಡಿಸಿದೆ. ಸೇವಾ ಸಂಕಲ್ಪ ಅಭಿಯಾನವು ಬಿಜೆಪಿ ಅಥವಾ ನರೇಂದ್ರ ಮೋದಿಯವರ ರಾಜಕೀಯ ಪ್ರಚಾರ ಕಾರ್ಯಕ್ರಮವಲ್ಲ, ಬದಲಾಗಿ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಕೇಂದ್ರ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಪ್ರಯೋಜನಗಳು ತಲುಪುತ್ತಿವೆ ಎಂಬುದನ್ನು ಖಚಿತಪಡಿಸಿಕೊಳ್ಳುವ ಒಂದು ಅವಕಾಶವಾಗಿದೆ ಎಂದು ವಿ.ಕೆ. ಸಜೀವನ್ ತಿಳಿಸಿದರು.

ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಅಧ್ಯಕ್ಷತೆ ವಹಿಸಿದ್ದರು.

ಕಣ್ಣೂರು ವಲಯ ಸಂಘಟನಾ ಕಾರ್ಯದರ್ಶಿ ಶ್ರೀ ಎ.ವಿ. ಶಿಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪಿ.ಆರ್. ಸುನಿಲ್, ಎನ್. ಬಾಬುರಾಜ್, ಮನುಲಾಲ್ ಮೇಲತ್, ಹಿರಿಯ ಮುಖಂಡರಾದ ಎಂ. ಸಂಜೀವ ಶೆಟ್ಟಿ, ವಿ. ರವೀಂದ್ರನ್, ಅಡ್ವ. ಬಾಲಕೃಷ್ಣ ಶೆಟ್ಟಿ, ಸತೀಶ್ ಚಂದ್ರ ಭಂಡಾರಿ, ಸವಿತಾ ಟೀಚರ್, ಎ. ವೇಲಾಯುಧನ್, ರಾಮಪ್ಪ ಮಂಜೇಶ್ವರ, ಸುಧಾಮ ಗೋಸಾಡ ಮೊದಲಾದವರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು