ಬದಿಯಡ್ಕ ಗ್ರಾಮ ಪಂಚಾಯತ್‌ನಲ್ಲಿ ಪೋಷಣ್ ಮಾಸ ಕಾರ್ಯಕ್ರಮ



ಬದಿಯಡ್ಕ: ಬದಿಯಡ್ಕ ಗ್ರಾಮ ಪಂಚಾಯತ್, ICDS ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ CDS ಸಹಯೋಗದೊಂದಿಗೆ ಪೋಷಣ್ ಮಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಬದಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಡಿ. ಶಂಕರ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪೌಷ್ಟಿಕ ಆಹಾರ ಸೇವನೆಯು ಉತ್ತಮ ಆರೋಗ್ಯಕರ ಜೀವನಕ್ಕೆ ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಅಶ್ವಿನಿ ಕೆ.ಎಂ. ಅವರು ವಹಿಸಿದ್ದರು. ಪಂಚಾಯತ್ ಕ್ಷೇಮ ಕಾರ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ರಜನಿ ಸಂದೀಪ್, ಅಭಿವೃದ್ಧಿ  ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀ ಹಮೀದ್ ಕೆಡೆಂಜಿ ಹಾಗೂ ವಿವಿಧ ವಾರ್ಡ್‌ಗಳ ಜನಪ್ರತಿನಿಧಿಗಳು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ICDS ಮೇಲ್ವಿಚಾರಕರು ಸ್ವಾಗತಿಸಿದರು. CDS ಅಧ್ಯಕ್ಷರು ಧನ್ಯವಾದ ಅರ್ಪಿಸಿದರು. ಅಂಗನವಾಡಿ ಕಾರ್ಯಕರ್ತೆಯರು, CDS ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು