ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಶಾಸ್ತ್ರಮೇಳ


 ಬದಿಯಡ್ಕ: ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಶಾಲಾ ಮಟ್ಟದ ಶಾಸ್ತ್ರೋತ್ಸವ ಬುಧವಾರ ಜರಗಿತು. ದೀಪ ಪ್ರಜ್ವಲನೆಯ ಮೂಲಕ ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಸುಧಾಕರ ರೈ ಉದ್ಘಾಟಿಸಿದರು. ಮಾತೃ ಮಂಡಳಿಯ ಅಧ್ಯಕ್ಷೆ ಶಾಲಿನಿ, ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಮಧುಸೂಧನ, ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ವಿಜ್ಞಾನ, ಗಣಿತ, ಸಮಾಜ ವಿಜ್ಞಾನ, ತಂತ್ರಜ್ಞಾನ ಹಾಗೂ ಕಾರ್ಯಾನುಭವ ವಿಭಾಗದಲ್ಲಿ ವಿವಿಧ ಸ್ಪರ್ದೆಗಳಲ್ಲಿ ಭಾಗವಹಿಸಿದರು. ಒಟ್ಟು ೨೫೩ ಮಕ್ಕಳು ಶಾಸ್ತçಮೇಳದಲ್ಲಿ ಭಾಗವಹಿಸಿದರು. ಎಲ್ ಪಿ ವಿಭಾಗದ ೭೫ ಮಕ್ಕಳು, ಯುಪಿ ವಿಭಾಗದಲ್ಲಿ ೭೮ ಮಕ್ಕಳು, ಹೈಸ್ಕೂಲ್ ವಿಭಾಗದಲ್ಲಿ ೧೦೦ ಮಕ್ಕಳು ಭಾಗವಹಿಸಿದರು. ವಿದ್ಯಾರ್ಥಿಗಳು ತಮ್ಮ ವೈಜ್ಞಾನಿಕ ಜ್ಞಾನ, ಸೃಜನ ಶೀಲತೆ ಮತ್ತು ಪ್ರತಿಭೆಯನ್ನು ಮಾದರಿಗಳು, ಪ್ರಯೋಗಗಳು ಹಾಗೂ ವಿವಿಧ ಉತ್ಪನ್ನಗಳನ್ನು ತಯಾರಿಸುವುದರ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಸಂಶೋಧನಾ ಆಸಕ್ತಿ ಮತ್ತು ಹೊಸ ಆಲೋಚನೆಗಳನ್ನು ಬೆಳೆಸಲು ಸಹಕಾರಿಯಾಯಿತು. ಶಾಲಾ ಶಿಕ್ಷಕಿ ಶುಭ ನಿರೂಪಿಸಿದರು. ಶಿಕ್ಷಕಿಯರಾದ ಗಾಯತ್ರಿ ಭಟ್ ಸ್ವಾಗತಿಸಿ, ಮೊನೀಶಾ ವಂದಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು