ಉಪ್ಪಳ: ನದಿಯಲ್ಲಿ ಸ್ನಾನ ಮಾಡಲು ಇಳಿದ ಯುವಕನೊಬ್ಬ ಮುಳುಗಿ ಸಾವನ್ನಪ್ಪಿದ್ದು, ಮತ್ತೊಬ್ಬರು ಅದೃಷ್ಟವಶಾತ್ ಪಾರಾದ ಘಟನೆ ನಡೆದಿದೆ.
ಉಪ್ಪಳದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ವಿಶಾಲ್ (21) ಮೃತಪಟ್ಟ ಯುವಕ.
ವಿಶಾಲ್ ಮತ್ತು ಅವರ ಸ್ನೇಹಿತರು ಉಪ್ಪಳ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ವಿಶಾಲ್ ನದಿಯಲ್ಲಿ ಮುಳುಗಿ ಹೋಗಿದ್ದಾರೆ. ಜತೆಗಿದ್ದ ಸ್ನೇಹಿತ ವಿಶಾಲ್ ಅವರನ್ನು ರಕ್ಷಿಸಲು ಯತ್ನಿಸಿದರಾದರೂ ವಿಫಲರಾದರು. ಬಳಿಕ ಈ ಕುರಿತು ಸ್ಥಳೀಯರಿಗೆ ಮಾಹಿತಿ ನೀಡಲಾಯಿತು.
ಮಾಹಿತಿ ತಿಳಿದು ಉಪ್ಪಳದಿಂದ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಶೋಧ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿದ್ದಾರೆ.
Tags
ಉಪ್ಪಳ
