ಪೆರ್ಲ: ನಾಲಂದ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ, ಪೆರ್ಲದ ಎನ್‌ಎಸ್‌ಎಸ್ ಘಟಕ ಸಂಖ್ಯೆ 49ರ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಯಿತು.
ವಿದ್ಯಾರ್ಥಿಗಳಲ್ಲಿ ಪ್ರವಾಸೋದ್ಯಮ, ವಿವಿಧ ದೇಶಗಳು, ಪ್ರಸಿದ್ಧ ಪ್ರವಾಸಿ ತಾಣಗಳು, ಸಂಸ್ಕೃತಿ, ಪರಂಪರೆ ಹಾಗೂ ವಿಶ್ವದ ವೈವಿಧ್ಯಮಯ ಪ್ರವಾಸಿ ಸ್ಥಳಗಳ ಕುರಿತು ಜ್ಞಾನವನ್ನು ವೃದ್ಧಿಸುವ ಉದ್ದೇಶದಿಂದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಕಾಲೇಜಿನ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.
ರಸಪ್ರಶ್ನೆಯ ಮೂಲಕ ವಿದ್ಯಾರ್ಥಿಗಳ ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವುದರ ಜೊತೆಗೆ ಪ್ರವಾಸೋದ್ಯಮದ ಮಹತ್ವ, ವಿವಿಧ ಸಂಸ್ಕೃತಿಗಳ ಅರಿವು ಮತ್ತು ವಿಶ್ವದ ಪ್ರಮುಖ ಪ್ರವಾಸಿ ತಾಣಗಳ ಬಗ್ಗೆ ತಿಳಿದುಕೊಳ್ಳಲು ಅವಕಾಶ ಕಲ್ಪಿಸಲಾಯಿತು. ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಎನ್‌ಎಸ್‌ಎಸ್ ಸ್ವಯಂಸೇವಕರು ಕಾರ್ಯಕ್ರಮದ ಸಂಘಟನೆ ಹಾಗೂ ನಿರ್ವಹಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ “Explore, Learn, Discover” ಎಂಬ ಪ್ರವಾಸೋದ್ಯಮದ ಮನೋಭಾವವನ್ನು ಬೆಳೆಸುವಲ್ಲಿ ಸಹಕಾರಿಯಾಯಿತು.
Tags
ಪೆರ್ಲ
