ಮಗಳ ಸ್ನೇಹಿತೆಗೆ ಅಸಭ್ಯ ಸಂದೇಶ ಕಳುಹಿಸಿದ ವ್ಯಕ್ತಿಯ ವಿರುದ್ಧ ಪೋಕ್ಸೋ ಕೇಸು


 ಕಾಸರಗೋಡು: ಮಗಳ ಸ್ನೇಹಿತೆಗೆ ಅಸಭ್ಯ ಸಂದೇಶ ಕಳುಹಿಸಿದ ವ್ಯಕ್ತಿಯ ವಿರುದ್ಧ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಸೆಬಾಸ್ಟಿಯನ್ ಎಂಬ ವ್ಯಕ್ತಿಯ ವಿರುದ್ಧ ಚಿತ್ತಾರಿಕಾಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಯ ಮಗಳು ಮತ್ತು ದೂರು ನೀಡಿದ ಬಾಲಕಿ ಇಬ್ಬರೂ 10ನೇ ತರಗತಿ ವಿದ್ಯಾರ್ಥಿನಿಯರು. ಆರೋಪಿ ಮತ್ತು ಆತನ ಮಗಳು ಒಂದೇ ಮೊಬೈಲ್ ಫೋನ್ ಬಳಸುತ್ತಿದ್ದಾರೆ. ಇದರ ಮೂಲಕವೇ ದೂರುದಾರರ ಮೊಬೈಲ್ ಫೋನ್ ನಂಬರ್ ಆರೋಪಿಗೆ ಸಿಕ್ಕಿರಬಹುದು ಎಂದು ಶಂಕಿಸಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರೆ ಮಾತ್ರ ಹೆಚ್ಚಿನ ಮಾಹಿತಿ ಹೊರಬರಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು