ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ನಿಧನ


 

ಬದಿಯಡ್ಕ: ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನೆಕ್ರಾಜೆ ಕಣಿಯಾ ಮೂಲೆ ಬಳಿಯ ಧನುಷಾ (17) ಮೃತಪಟ್ಟವರು. ಮುಳ್ಳೇರಿಯ ಸರಕಾರಿ ವೊಕೇಷನಲ್ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ಹ್ಯುಮಾನಿಟೀಸ್ ವಿದ್ಯಾರ್ಥಿನಿಯಾಗಿದ್ದರು.

ಪೋಷಕರು ಎಂದಿನಂತೆ ಕೆಲಸಕ್ಕೆ ಹೋಗಿದ್ದರು. ಸಂಜೆ ಕೆಲಸ ಮುಗಿಸಿ ವಾಪಸ್ ಬಂದಾಗ ಮಲಗುವ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಕ್ಷಣ ಚೆರ್ಕಳದ ಆಸ್ಪತ್ರೆಗೆ ಕರೆದೊಯ್ದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಮಾಜಿ ಪ್ರವಾಸಿ ಹಾಗೂ ಕೃಷಿಕರಾದ ಜಯರಾಮ್ ಮತ್ತು ಬಿಂದು ದಂಪತಿಯ ಪುತ್ರಿಯಾಗಿದ್ದಾರೆ. ಸಹೋದರರು: ಧನ್ಯ, ಧನುಷ್. ಬದಿಯಡ್ಕ ಪೊಲೀಸರು ಇನ್ವೆಸ್ಟ್ ನಡೆಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು