ಸೀತಾಂಗೋಳಿ: ಸೀತಾಂಗೋಳಿ-ಪೆರ್ಲ ರಸ್ತೆಯ ಪುತ್ತಿಗೆ, ಮುಗು ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾರೆ. ಊಜಂಪದವು ನಿವಾಸಿ ಮೊಹಮ್ಮದ್ ಎಂಬವರ ಪುತ್ರ ಎಂ.ಟಿ. ಮೊಹಮ್ಮದ್ ಅಶ್ರಫ್ (48) ಮೃತಪಟ್ಟವರು. ಗಂಭೀರವಾಗಿ ಗಾಯಗೊಂಡಿರುವ ಇವರ ಪತ್ನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಇಂದು (ಗುರುವಾರ) ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಮೊಹಮ್ಮದ್ ಅಶ್ರಫ್ ಚಲಾಯಿಸುತ್ತಿದ್ದ ಬೈಕ್ ಹಾಗೂ ಎದುರು ದಿಕ್ಕಿನಿಂದ ಬಂದ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಮೊಹಮ್ಮದ್ ಅಶ್ರಫ್ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.
Tags
ಸೀತಾಂಗೋಳಿ
